ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಡಿಸೆಂಬರ್ 30 ರಂದು ನಡೆಯುವ 7 ನೇ ವರುಷದ ಮಂಗಳೂರು ರಾಮ ಲಕ್ಷ್ಮಣ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ಜನತಾ ಡಿಲಕ್ಸ್ ಹೋಟೆಲಿನ ಸಭಾಂಗಣದಲ್ಲಿ ನಡೆಯಿತು.
ಸಮಿತಿಯ ಗೌರವ ಸಲಹೆಗಾರರಾದ ಪ್ರಸಾದ್ ಶೆಟ್ಟಿಯವರು ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಲೋಕೇಶ್ ಮುಚ್ಚೂರು, ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷ ಪಿ.ಆರ್.ಶೆಟ್ಟಿ, ತೀರ್ಪುಗಾರರ ಸಮಿತಿಯ ಸಂಚಾಲಕ ವಿಜಯಕುಮಾರ್ ಕಂಗಿನಮನೆ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್ ಮಾತನಾಡಿದರು. ವೇದಿಕೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಂಗಳೂರು ಕಂಬಳ ಸಮಿತಿಯ ಕಾರ್ಯದರ್ಶಿಗಳಾದ ಮನ್ಮಥ ಶೆಟ್ಟಿಯವರಿಗೆ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ ಕಂಬಳದ ರೂವಾರಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಮಾತನಾಡಿ ಮಂಗಳೂರು ಮಹಾನಗರದಲ್ಲಿ ಕಂಬಳ ಆರಂಭಿಸಲು ಸಹಕಾರ ನೀಡಿದವರನ್ನು ಸ್ಮರಿಸಿದರು. 7 ನೇ ವರುಷದ ಕಂಬಳದ ವ್ಯವಸ್ಥೆಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

ಕಂಬಳ ಸಮಿತಿಯ ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯಗುತ್ತು ಸ್ವಾಗತಿಸಿದರು. ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು. ಉಪಾಧ್ಯಕ್ಷ ಈಶ್ವರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.



























