ಸುಳ್ಯ : ಇದೀಗ ಸುರಿದ ಭಾರೀ ಮಳೆಗೆ ಏಕಾಏಕಿ ಭೂಮಿ ಕುಸಿದು ಬೃಹತ್ ಹೊಂಡ ನಿರ್ಮಾಣವಾದ ಘಟನೆ ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗ ನಡೆದಿದೆ.

ಸುಮಾರು ಹತ್ತು ಅಡಿಯಷ್ಟು ಉದ್ದಕ್ಕೆ ಗುಂಡಿ ನಿರ್ಮಾಣವಾಗಿದ್ದು, ಪಕ್ಕದಲ್ಲಿರುವ ವಿದ್ಯುತ್ ಕಂಬ ಬೀಳುವ ಆತಂಕ ಎದುರಾಗಿದೆ.
ಸ್ಥಳೀಯರು ಮೆಸ್ಕಾಂನವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.



























