ಬಂಟ್ವಾಳ : ತಾಲೂಕಿನ ಶಂಭೂರು ಎ.ಎಂಆರ್.ಡ್ಯಾಂ ನ ಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಬಗ್ಗೆ ವರದಿಯಾಗಿದೆ.
ನೇತ್ರಾವತಿ ನದಿಯಲ್ಲಿ ಶವ ತೇಲಾಡುವುದು ಕಂಡು ಬಂದಿದ್ದು, ಎ.ಎಂ.ಆರ್.ಡ್ಯಾಂ ನ ಕಾರ್ಮಿಕರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ ಶವ ಸಂಪೂರ್ಣ ಕೊಳೆತು ಹೋಗಿದ್ದು ಸುಮಾರು 15 ದಿನಗಳ ಹಿಂದೆ ನದಿಗೆ ಬಿದ್ದಿರುವ ಬಗ್ಗೆ ಸಂಶಯವಿದೆ. ಮೃತ ವ್ಯಕ್ತಿ ಪುರುಷ ಅಥವಾ ಮಹಿಳೆಯಾ ಎಂಬುದನ್ನು ಗುರುತು ಹಿಡಿಯಲು ಅಸಾಧ್ಯವಾದ ಪರಿಸ್ಥಿತಿ ಇದ್ದು, ಕೈಯಲ್ಲಿ ಫ್ಯಾನ್ಸಿಯ ಬ್ರೈಸ್ ಲೈಟ್ ಒಂದು ಕಂಡು ಬಂದಿದೆ.
ಮೃತದೇಹವನ್ನು ಪೊಲೀಸರು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶೀಥಲೀಕರಣದಲ್ಲಿಡಲಾಗಿದ್ದು, ಶವದ ಗುರುತು ಪತ್ತೆ ಹಚ್ಚಲು ಬಂಟ್ವಾಳ ಆಸ್ಪತ್ರೆಗೆ ಹೋಗಬಹುದು ಎಂದು ತಿಳಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಎಸ್.ಐ. ಹರೀಶ್ ಸಿಬ್ಬಂದಿಗಳಾದ ಸುರೇಶ್, ಪುನೀತ್ ಮತ್ತು ಮಹಾದೇವ ಅವರು ನೇತ್ರಾವತಿ ನದಿಯಿಂದ ಮೃತದೇಹವನ್ನು ಮೇಲ್ಕೆತ್ತಿದ್ದಾರೆ.
ಸುಮಾರು 15 ದಿನಗಳ ಕಾಲಕ್ಕೂ ಅಧಿಕ ದಿನಗಳಾಗಿರುವ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದ್ದು, ಮೃತದೇಹವನ್ನು ಸಂಬಂಧಿಕರು ಗುರುತು ಪತ್ತೆ ಮಾಡುವವರೆಗೆ ಸಂರಕ್ಷಿಸುವ ದೃಷ್ಟಿಯಿಂದ ಸ್ಥಳೀಯ ಆಸ್ಪತ್ರೆಯಲ್ಲಿ ಶವಗಾರದಲ್ಲಿ ಇಡಲಾಗಿದೆ ಎಂದು ಎಸ್.ಐ.ಹರೀಶ್ ತಿಳಿಸಿದ್ದಾರೆ.


























