ಪುತ್ತೂರು : ಮೇ.15 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ವಾಣಿಜ್ಯ ವಿಭಾಗದ “ವಾಣಿಜ್ಯ ಪದವಿಧರರಿಗೆ ಇರುವ ಉದ್ಯೋಗ ಅವಕಾಶಗಳು” ಎಂಬ ವಿಷಯದ ಬಗ್ಗೆ ಆನ್ ಲೈನ್ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಜರಗಿದ ಈ ಕಾರ್ಯಕ್ರಮದಲ್ಲಿ ಸಿಎ ಸುಬ್ರಹ್ಮಣ್ಯ ಭಟ್. ಕೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.
ಅವರು ಬಿ. ಕಾಮ್ ಪದವಿಯ ನಂತರದ ಸ್ನಾತಕೋತ್ತರ ಅಧ್ಯಯನಗಳ ಸಿಎ- ಸಿಎಸ್-ಐಸಿಡಬ್ಲೂ ಎ ನಂತಹ ಕೋರ್ಸ್ ಗಳ ಬಗೆಗಿನ ವಿವರಣೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿಧಾನ, ಕಂಪ್ಯೂಟರ್ ಜ್ಞಾನದ ಅವಶ್ಯಕತೆ ಮತ್ತು ಷೇರು ಮಾರುಕಟ್ಟೆಯ ವಿಶ್ಲೇಷಣೆಗಳ ಬಗ್ಗೆ ವಿವರಣೆ ನೀಡಿದರು. ಅಲ್ಲದೇ, “ಅಣುಕು ಸಂದರ್ಶನ” ವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿಯವರು ಮಾತನಾಡಿ ಪ್ರತೀ ವರ್ಷ ಪದವಿ ಪಡೆದು ಹೊರಬರುತ್ತಿರುವ ವಿದ್ಯಾರ್ಥಿಗಳಿಗೆ ಮುಂದೆ ಏನು ಯೋಜನೆ ಇರುತ್ತದೆ. ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಇಂತಹ ಕಾರ್ಯಕ್ರಮ ಪ್ರಯೋಜನಕಾರಿ ಎಂದು ತಿಳಿಸಿದರು.
ಪ್ರಸ್ತಾವಿಕ ಮಾತುಗಳೊಡನೆ ಸ್ವಾಗತ ಕೋರಿದ ಐಕ್ಯೂವಿಸಿಯ ಸಂಯೋಜಕರು & ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಹರಿಪ್ರಸಾದ್ ಎಸ್ ಇವರು ಮಾತಾಡಿ ವಿದ್ಯಾರ್ಥಿಗಳಿಗೆ ವೃತ್ತಿ ಅವಕಾಶಗಳನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗೂಗಲ್ ಮೀಟ್ ಮೂಲಕ ನಡೆದ ಈ ಆನ್ ಲೈನ್ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ವಾಣಿಜ್ಯ ಸಂಘದ ಸಂಯೋಜಕರಾದ ದೀಕ್ಷಿತ್ ಕುಮಾರ್ ಇವರು ವಂದಿಸಿದರು. ತೃತೀಯ ಬಿ. ಕಾಮ್ ನ ಜೀವನ್ ಬಿ ಕಾರ್ಯಕ್ರಮವನ್ನು ನಿರ್ವಹಿಸಿದರು.