ಪುತ್ತೂರು : ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರನ್ನು ಸ್ಥಳ ಮಹಜರು ನಡೆಸಲು ನೆಹರುನಗರಕ್ಕೆ ಕರೆ ತರಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವವರನ್ನು ಪೊಲೀಸರು ನೆಹರುನಗರಕ್ಕೆ ಕರೆ ತಂದಿದ್ದು, ಘಟನೆ ನಡೆದ ಜಾಗಗಳಲ್ಲಿ ಮಹಜರು ನಡೆಸಲಾಗುತ್ತಿದೆ.

ಪ್ರಕರಣದ ಹಿನ್ನೆಲೆ :
ನ.6 ರಂದು ರಾತ್ರಿ ಪುತ್ತೂರು ನೆಹರೂ ನಗರದಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಷಯ ಕಲ್ಲೇಗ ಹಾಗೂ ಮನೀಶ್, ಚೇತನ್ ಎಂಬವರೊಂದಿಗೆ ದೂರವಾಣಿ ಕರೆಯ ಮೂಲಕ ಮಾತಿನ ಚಕಮಕಿ ನಡೆದಿದ್ದು, ಸದರಿ ಪ್ರಕರಣ ಮುಂದುವರಿದಂತೆ, ಸ್ವಲ್ಪ ಸಮಯದ ಬಳಿಕ, ಅಕ್ಷಯ್ ಕಲ್ಲೇಗ ತನ್ನ ಗೆಳೆಯನಾದ ವಿಖ್ಯಾತ್ ನೊಂದಿಗೆ, ಪುತ್ತೂರು ನೆಹರೂ ನಗರದ ಬಳಿಯಿರುವ ಎಟಿಎಂ ಪಕ್ಕದಲ್ಲಿ ನಿಂತುಕೊಂಡ್ಡಿದಾಗ ಕಾರಿನಲ್ಲಿ ಬಂದ ಚೇತನ್, ಮನೀಶ್, ಮಂಜ ಮತ್ತು ಕೇಶವ ಎಂಬುವರುಗಳು ಅಕ್ಷಯ್ ನೊಂದಿಗೆ ದೂರವಾಣಿ ಕರೆಯ ಮೂಲಕ ನಡೆದಿದ್ದ ಮಾತಿನ ಚಕಮಕಿಯ ವಿಚಾರದಲ್ಲಿ ತಕರಾರು ತೆಗೆದು, ಅವ್ಯಾಚವಾಗಿ ಬೈದು, ತಾವುಗಳು ತಂದಿದ್ದ ತಲವಾರಿನಿಂದ ಹಲ್ಲೆ ನಡೆಸಿರುತ್ತಾರೆ.
ಈ ವೇಳೆ ವಿಖ್ಯಾತ್ ಓಡಿ ತಪ್ಪಿಸಿಕೊಂಡಿದ್ದು, ಅಕ್ಷಯ ಕಲ್ಲೇಗ ರನ್ನು ಚೇತನ್, ಮನೀಶ್, ಮಂಜ ಮತ್ತು ಕೇಶವ ಸೇರಿಕೊಂಡು ತಲವಾರಿನಿಂದ ಕಡಿದು ಕೊಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ:106-2023 ಕಲಂ: 341,504,506,307,302 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.