ಪುತ್ತೂರು : ನವವಿವಾಹಿತೆಯೋರ್ವರು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ.
ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಪುಷ್ಪ (22) ಮೃತ ಮಹಿಳೆ.

ನ.7 ರಂದು ಮುಂಜಾನೆ ಪುಷ್ಪ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪುಷ್ಪ ಅವರಿಗೆ 6 ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು.
ಮೃತರು ಪತಿ ಸಂತೋಷ್ ಕುಲಾಲ್, ಅತ್ತೆ, ಮಾವ ರನ್ನು ಅಗಲಿದ್ದಾರೆ.




























