ಬಂಟ್ವಾಳ : ಜಲ್ಲಿ ಸಾಗಿಸುವ ಟಿಪ್ಪರ್ ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.
ಈ ಅಪಘಾತದಲ್ಲಿ ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮೈಸೂರು ಮೂಲದ ಕೃಷ್ಣ ಅರಸ ಎಂಬವರ ಕಾರಿಗೆ ಕೆ.ಎನ್.ಆರ್.ಸಿ. ಕಂಪೆನಿಯ ಲಾರಿ ಡಿಕ್ಕಿಯಾಗಿದೆ.
ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಅವರು ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ವೇಳೆ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಆದರೇ ಅದೃಷ್ಟವಶಾತ್ ಕಾರು ಚಾಲಕ ಕೃಷ್ಣ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.


























