ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದಿರೆಯ ಸಹಯೋಗದೊಂದಿಗೆ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ಇಶಾನ್ ಕಾರ್ಯಪ್ಪ ಸೇರಾಜೆ ಇವರು 17 ರ ವಯೋಮಾನದ ಬಾಲಕರ ಹ್ಯಾಮರ್ ತ್ರೋದಲ್ಲಿ ಪ್ರಥಮ ಸ್ಥಾನ ಪಡೆದು ಪುತ್ತೂರು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ಇವರು ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಭಾನುಪ್ರಕಾಶ್ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಇವರು ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶೇಷಪ್ಪ ಗೌಡ ಹಾಗೂ ಕವಿತಾ ದಂಪತಿಗಳ ಪುತ್ರ.


























