ಪುತ್ತೂರು : ಪುತ್ತಿಲ ಪರಿವಾರ ಕಚೇರಿಯ ಮುಂಭಾಗ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ ದಿನೇಶ್ ಪಂಜಿಗ ಅವರು ಪುತ್ತಿಲ ಪರಿವಾರದ ಮನೀಶ್ ಕುಲಾಲ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.
ಕಳೆದ ವಿಧಾನಸಭಾ ಚುನಾವಣೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಂಘಟನೆಯ ಮುಖಂಡರುಗಳನ್ನು ಅವಾಚ್ಯವಾಗಿ ನಿಂದಿಸಿ ಕಾರ್ಯಕರ್ತರನ್ನು ಕೆರಳಿಸುವ ರೀತಿಯಲ್ಲಿ ಸಂದೇಶ ಹಾಕುತ್ತಿದ್ದ ವಿಚಾರವನ್ನು ಪ್ರಶ್ನಿಸಿರುವುದಕ್ಕೆ ಮನೀಶ್ ಕುಲಾಲ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆಯೊಡ್ಡಿದ್ದಲ್ಲದೆ ಕಚೇರಿಗೆ ಬರುವಂತೆ ತಿಳಿಸಿದ್ದರು.
ಅದರಂತೆ ಅಲ್ಲಿಗೆ ಹೋದಾಗ ಅಲ್ಲಿದ್ದವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ಮನೀಶ್ ಕುಲಾಲ್ ಮತ್ತು ಅವರ ಜೊತೆಗಿದ್ದವರ ವಿರುದ್ಧ ಕಾನೂನುಕ್ರಮ ಕೈಗೊಳ್ಳುವಂತೆ ದಿನೇಶ್ ಪಂಜಿಗ ದೂರಿನಲ್ಲಿ ತಿಳಿಸಿದ್ದಾರೆ.

























