ಪುತ್ತೂರು : ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಚಾಮರಾಜನಗರದಲ್ಲಿ ನಡೆದ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ರಾಮ್ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಎಸ್‌ಜಿಎಫ್‌ಐ( ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ) ಗೆ ಆಯ್ಕೆಯಾಗಿದ್ದಾರೆ.

ಈತನು ಪುತ್ತೂರು ಕರಿಯಾಲದ ದಿನೇಶ್ ಪ್ರಸನ್ನ ಮತ್ತು ಉಮಾ ದಂಪತಿ ಪುತ್ರ.

ಒಟ್ಟು 9 ಹಂತದ ಸುತ್ತಿನಲ್ಲಿ ನಡೆದ ಚೆಸ್ ಸ್ಪರ್ಧೆಯಲ್ಲಿ 8.5 ಅಂಕಗಳನ್ನು ಗಳಿಸಿ ಈ ಮೂಲಕ ರಾಜ್ಯಮಟ್ಟದಲ್ಲೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

























