ಮಂಗಳೂರು : ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಮೃತರು.
ಸೋಮವಾರ ಮುಂಜಾನೆ ಪ್ರಕೃತಿ ಮಹಿಳಾ ಹಾಸ್ಟೆಲ್ ನಲ್ಲಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ ಎಂದು ವರದಿಯಾಗಿದೆ.


























