ಉಡುಪಿ : ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿಯಿಂದ ಉಡುಪಿ ಪೊಲೀಸರು ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ.
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಭಾನುವಾರದಂದು ತಾಯಿ ಹಸೀನಾ(46), ಪುತ್ರಿಯರಾದ ಅಫ್ನಾನ್ (23), ಅಯ್ನಾಝ್ (21) ಮತ್ತು ಪುತ್ರ ಆಸೀಮ್ (12) ನನ್ನು ಹತ್ಯೆ ಮಾಡಲಾಗಿತ್ತು.























