ನೆಲ್ಯಾಡಿ : ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಕಾಲು ಜಾರಿ ನೀರು ಪಾಲಾಗಿದ್ದ ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ (34) ರವರ ಮೃತದೇಹ ನ.15 ರಂದು ಮಧ್ಯಾಹ್ನ ಪತ್ತೆಯಾಗಿದೆ.

ಅಗ್ನಿಶಾಮಕ ಹಾಗೂ ಶೌರ್ಯ ವಿಪತ್ತು ತಂಡದವರು ಮೃತದೇಹ ಪತ್ತೆ ಹಚ್ಚಿದ್ದಾರೆ.
ಸೋಮಶೇಖರ ರವರು ನ.14 ರಂದು ಸಂಜೆ ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಕಾಲು ಜಾರಿ ನೀರು ಪಾಲಾಗಿದ್ದರು.
ಕೊಂಬಾರು ಮೂಲದ ಸೋಮಶೇಖರ್ ರೆಂಜಿಲಾಡಿಯಲ್ಲಿ ವಾಸ್ತವ್ಯವಿದ್ದರು.
ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

























