ಪುತ್ತೂರು : ಪೊಲೀಸ್ ಸಿಬ್ಬಂದಿಯೋರ್ವರ ಮೇಲೆ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದ ಬಳಿ ನಡೆದಿದೆ.
ಅಮಲು ಪದಾರ್ಥ ಸೇವಿಸಿ ಗಲಾಟೆ ಮಾಡುತ್ತಿರುವ ಬಗ್ಗೆ 112ಗೆ ಕರೆ ಬಂದ ಹಿನ್ನೆಲೆ ಆ ಸ್ಥಳಕ್ಕೆ ತೆರಳಿದಾಗ ನಶೆಯಲ್ಲಿದ್ದ ವ್ಯಕ್ತಿಯೋರ್ವ ಕಲ್ಲಿನಿಂದ ಪೊಲೀಸ್ ಸಿಬ್ಬಂದಿಯೋರ್ವರಿಗೆ ಹಲ್ಲೆ ನಡೆಸಿದ್ದಾನೆ.
ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.