ಪುತ್ತೂರು : ಹಾವು ಕಚ್ಚಿದ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮುರಳಿಕೃಷ್ಣ ಹಸಂತಡ್ಕ, ಚನಿಲ ತಿಮ್ಮಪ್ಪ ಶೆಟ್ಟಿ, ಆರ್.ಸಿ ನಾರಾಯಣ್, ಅರುಣ್ ವಿಟ್ಲ, ಸೀತಾರಾಮ ರೈ ಕೆದಂಬಾಡಿಗುತ್ತು ಸಹಿತ ಹಲವರು ಉಪಸ್ಥಿತರಿದ್ದರು.

ನಿನ್ನೆ ಸಂಜೆ ವೇಳೆ ಮನೆಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಮಠಂದೂರು ರವರಿಗೆ ಹಾವು ಕಚ್ಚಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
