ಪುತ್ತೂರು : ಮೂವರು ಅಪ್ರಾಪ್ತೆಯರಿಗೆ ಇನ್‌ಸ್ಟ್ರಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ದೂರಿಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಮಂಗಳೂರು ಅಡ್ಯಾರುಪದವು ನಾರಾಯಣ ಪೂಜಾರಿ ಎಂಬವರ ಪುತ್ರ ಸಂತೋಷ್ ಯಾನೆ ರಿತಿಕ್ಷ್ ಬಂಧಿತ ಯುವಕ.
ಆರೋಪಿ ಪುತ್ತೂರಿನ ಮೂವರು ಅಪ್ರಾಪ್ತೆಯರನ್ನು ಇನ್ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು ಮೆಸೇಜ್ ಮತ್ತು ಕರೆ ಮಾಡಿ ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ತನಿಖೆ ನಡೆಸಿದರು.
ಆರೋಪಿಯನ್ನು ಮಂಗಳೂರಿನಿಂದ ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಭಾರ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇವರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.