ತುಮಕೂರು : ಹಂದಿ ಕದ್ದಿದ್ದಾರೆ ಎಂದು 2 ಗುಂಪುಗಳ ಮಧ್ಯೆ ಮಾರಾಮಾರಿ ಆಗಿರೋ ಘಟನೆ ತುಮಕೂರು ಜಿಲ್ಲೆ ಪಾವಗಡದ ಬಳ್ಳಾರಿ ರಸ್ತೆಯಲ್ಲಿ ನಡೆದಿದೆ.
ಗಲಾಟೆಯಲ್ಲಿ ಪುರುಷರು ಮತ್ತು ಮಹಿಳೆಯರು ಪರಸ್ಪರ ಬಡಿದಾಡಿಕೊಂಡಿದ್ದಾರೆ.
ಇನ್ನು, ಮಹಿಳೆಯೊಬ್ಬಳ ಮೇಲೆ ಮತ್ತೋರ್ವ ಮಹಿಳೆ ಸೈಜುಗಲ್ಲನ್ನೇ ಎತ್ತಿಹಾಕಿದ್ದಾರೆ. ಗಲಾಟೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಪಾವಗಡ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ಆಗಿದೆ.
ಸದ್ಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸರು ಕೇಸ್ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳನ್ನು ಸ್ಟೇಷನ್ಗೆ ಕರೆಸಿ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

























