ಮಂಗಳೂರು : ರಾಷ್ಟ್ರಭಕ್ತ ನಾಗರಿಕರ ವತಿಯಿಂದ ರಜೌರಿಯ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ಕ್ಯಾಪ್ಟನ್ ಎಂ ವಿ ಪ್ರಾಂಜಲ್, ಕ್ಯಾಪ್ಟನ್ ಶುಭಂ ಗುಪ್ತಾ, ಹವಾಲ್ದಾರ್ ಅಬ್ದುಲ್ ಮಜೀದ್, ಲ್ಯಾನ್ಸ್ ನಾಯಕ್ ಸಂಜಯ್ ಬಿಷ್ಟ್ ಹಾಗೂ ಪ್ಯಾರಾಟ್ರೂಪರ್ ಸಚಿನ್ ಲಾರ್ ರವರಿಗೆ ಕದ್ರಿ ಯುದ್ಧ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕ್ಯಾಪ್ಟನ್ ದೀಪಕ್ ಅಡ್ಯಂತಾಯ, ಕೆ ಪಿ ಟಿ ಪ್ರಾಂಶುಪಾಲರಾದ ಹರೀಶ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ಸುಜಿತ್ ಪ್ರತಾಪ್, ಈಶ್ವರ್ ಶೆಟ್ಟಿ, ಪ್ರಕಾಶ್ ಗರೋಡಿ, ಲೋಕೇಶ್ ಶೆಟ್ಟಿ, ಸಾಕ್ಷಾತ್ ಶೆಟ್ಟಿ, ಫ್ರಾಂಕ್ಲಿನ್ ಮಂತೇರೋ, ಅಜಿತ್ ಬೋಪಯ್ಯ, ಅನುಶ್ ರೈ, ಅಭಿಷೇಕ್ ರೈ ಹಾಗೂ ಕೆಪಿಟಿಯ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




























