ಮಂಗಳೂರು : ಟೀಮ್ ಪುನರ್ಜನ್ಮ ವತಿಯಿಂದ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ಯೋಧರಿಗೆ ಮಂಗಳೂರಿನ ಕದ್ರಿಯಲ್ಲಿರುವ ಯುದ್ಧ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಹಿಂದೂ ಸಂರಕ್ಷಣಾ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಕೆ.ಆರ್. ಶೆಟ್ಟಿ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಹರ್ಷಿತ್ ಶಕ್ತಿನಗರ, ಜಿಲ್ಲಾ ಸಹ ಸಂಯೋಜಕ ಕಾರ್ತಿಕ್ ಬರ್ಕೆ ಮತ್ತು ಕಾರ್ಯಕಾರಿ ಸದಸ್ಯ ಅನಿಲ್ ಕೋಡಿಕಲ್, ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಇದರ ಕಾರ್ಯಕಾರಿಣಿ ಸದಸ್ಯ ಗಣೇಶ್ ಕೆದಿಲ ಹಾಗೂ ಪುನರ್ಜನ್ಮ ತಂಡದ ಕಾರ್ಯಕರ್ತರು ಪಾಲ್ಗೊಂಡಿದ್ದರು.

