ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಧರ್ಮಸ್ಥಳ ತಿರುವಿನಲ್ಲಿ ಸೋಮವಾರದಂದು ನಡೆದಿದೆ.
ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟ ಮಾಡಲಾಗುತ್ತಿದ್ದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಆಗಮಿಸಿದ ಲಾರಿ ನಡುವೆ ಢಿಕ್ಕಿ ಸಂಭವಿಸಿದೆ. ಇದರಿಂದ ಟಾಟಾ ಸುಮೋ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.