ಪುತ್ತೂರು : ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಮಹಿಳೆಯೊಬ್ಬರಿಗೆ ಮದ್ಯ ಕುಡಿಸಿ ಅತ್ಯಾಚಾರ ಮಾಡಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಮೂಲತಃ ಆರ್ಯಾಪು ನಿವಾಸಿ, ಪ್ರಸ್ತುತ ಬನ್ನೂರಿನಲ್ಲಿ ವಾಸವಿರುವ ಸಂಶುದ್ದೀನ್ ಆಸ್ಗರ್ ಆಲಿ (23) ಬಂಧಿತ ಆರೋಪಿ.
ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಮಹಿಳೆ ನ.24 ರಂದು ರಾತ್ರಿ ವೇಳೆ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಸದರಿ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದು, ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 114/2023 ಕಲಂ 376 ಐ.ಪಿ.ಸಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ನ.28 ರಂದು ಸಂಜೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವರದಿಯಾಗಿದೆ.