ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯದಲ್ಲಿ ನಡೆದಿದೆ.
ಸಂಪ್ಯ ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ (46) ಮೃತರು.

ಪ್ರಕಾಶ್ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಮನೆಯವರು ಬೇರೆ ಕಡೆ ತೆರಳಿದ್ದ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿ ಎರಡು, ಮೂರು ದಿನ ಕಳೆದಿದೆನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ಪತ್ನಿ, ಮಗ ಹಾಗೂ ಮನೆಯವರನ್ನು ಅಗಲಿದ್ದಾರೆ.
ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ಇಂದು ಇದು ಮೂರನೇ ಆತ್ಮಹತ್ಯೆ ಪ್ರಕರಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.