ನೆಲ್ಯಾಡಿ : ಲಾರಿಯೊಂದಕ್ಕೆ ಯಾವುದೋ ವಾಹನ ಡಿಕ್ಕಿಯಾಗಿ ಪರಾರಿಯಾದ ಘಟನೆ ಶಿರಾಡಿ ಘಾಟ್ ನ ಗುಂಡ್ಯ ಗಡಿ ದೇವಸ್ಥಾನಕ್ಕಿಂತ ಮೇಲೆ ಕೆಂಪು ಹೊಳೆ ಬಳಿ ನಡೆದಿದೆ.
ಅಪಘಾತದಲ್ಲಿ ಮಿನಿ ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮಿನಿ ಲಾರಿ ಹಾಸನದಿಂದ ಮಂಗಳೂರಿಗೆ ಬರುತ್ತಿತ್ತು. ಶಿರಾಡಿ
ಘಾಟ್ ನ ಕೆಂಪು ಹೊಳೆ ಸಮೀಪ ಯಾವುದೋ ಘನ ವಾಹನ ಡಿಕ್ಕಿಯಾಗಿ ಪರಾರಿಯಾಗಿದೆ.
ಘಟನೆಯಲ್ಲಿ ಮಿನಿ ಲಾರಿ ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಸಕಲೇಶಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.