ಬೆಳ್ತಂಗಡಿ : ವರುಷದ ಹಿಂದೆ ನಡೆದಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.
09.02.2020 ರಂದು ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 13/2020 ಕಲಂ: 504,302, ಜೊತೆಗೆ 34 ಐ.ಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಾದ ಲಾಯಿಲ ಗ್ರಾಮ, ಬೆಳ್ತಂಗಡಿ ನಿವಾಸಿ ಯೋಗೀಶ್ (51) ಮತ್ತು ಅವರ ಮಗ ಜೀವನ್ ಎಂಬಾತನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಕೆಯಾಗಿರುತ್ತದೆ.
ನ್ಯಾಯಾಲಯದಲ್ಲಿ ವಿಚಾರಣೆ ನಡೆದು 06.12.2023 ರಂದು ಅಪರಾಧಿ ಯೋಗೀಶನಿಗೆ ಕಲಂ: 302 ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ರೂ 3,00,000/- ದಂಡ ವಿಧಿಸಿ ಆದೇಶ ಮಾಡಿದ್ದು, ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಲಾಗಿರುತ್ತದೆ.
ಸದರಿ ಪ್ರಕರಣದ ತನಿಖಾಧಿಕಾರಿಯಾಗಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಸಂದೇಶ್ ಪಿ ಜಿ ರವರು ಹಾಗೂ ತನಿಖಾ ಸಹಾಯಕರಾಗಿ ಎ ಎಸ್ ಐ ವೆಂಕಟೇಶ್ ರವರು ಕಾರ್ಯನಿರ್ವಹಿಸಿರುತ್ತಾರೆ. ನ್ಯಾಯಾಲಯ ಕರ್ತವ್ಯದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಜಗದೀಶ್ ರವರು ಸಹಕರಿಸಿರುತ್ತಾರೆ.
ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಜ್ಯೋತಿ ಪ್ರಮೋದ ನಾಯಕ್ ರವರು ನ್ಯಾಯಾಲಯದಲ್ಲಿ ವಾದಿಸಿರುತ್ತಾರೆ.