ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.
ಡಿ.6 ರಂದು ಸಂಜೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ಪರಿಣಾಮ ಸ್ಕೂಟರ್ ಸವಾರ ನಾರಾಯಣ ರವರು ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಕೂಡಲೇ ಗಾಯಾಳುವನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.