ಧರ್ಮಸ್ಥಳ : ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಿನಲ್ಲಿ ಹಣ ಸಂಗ್ರಹ ಮಾಡಿ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕು ನಿಡ್ಲೆ ನಿವಾಸಿ ಧನುಷ್ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಧನುಷ್ ರವರು ಡಿ.7 ರಂದು ಸಂಜೆ ಸಮಯ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಪರಾಂಡ ಎಂಬಲ್ಲಿ ತಮ್ಮ ಮನೆಯಲ್ಲಿರುವಾಗ, ಇಬ್ಬರು ಯುವಕರು ಬಂದು ನಾವು ಬೆಂಗಳೂರಿನಲ್ಲಿರುವ ಟ್ರಸ್ಟ್ ವತಿಯಿಂದ ದೇಣಿಗೆ ಸಂಗ್ರಹಣೆಗೆ ಬಂದಿದ್ದು, ದೇಣಿಗೆ ನೀಡುವಂತೆ ಕೇಳಿದಾಗ, ಸಂಶಯಗೊಂಡು ಅವರಲ್ಲಿದ್ದ ಸಂಸ್ಥೆಯದ್ದೆಂದು ಹೇಳಲಾದ ಮೊಬೈಲ್ ನಂಬರ್‌ಗೆ ಕರೆ ಮಾಡಿ ವಿಚಾರಿಸಿದಾಗ ನಾವು ಯಾರನ್ನೂ ಕಳುಹಿಸಿರುವುದಿಲ್ಲವೆಂದು ತಿಳಿಸಿರುತ್ತಾರೆ. ಆದ್ದರಿಂದ ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಿನಲ್ಲಿ ಹಣ ಸಂಗ್ರಹಣೆ ಮಾಡಿ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 99/2023 ಕಲಂ: 420 ಜೊತೆಗೆ 34 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























