ನವದೆಹಲಿ : ಸಂವಿಧಾನದ 370ನೇ ವಿದಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿತ್ತು. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇದನ್ನು ರದ್ದು ಪಡಿಸಿದೆ. ಭಾರತ ಸರ್ಕಾರದ ಈ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಆಗಿದ್ದವು. ಸುದೀರ್ಘ ವಿಚಾರಣೆ ನಡೆಸಿರುವ ಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡುತ್ತಿದೆ. ಕೆಲವೇ ಗಂಟೆಯಲ್ಲಿ ಸುಪ್ರೀಂ ತೀರ್ಪು ಹೊರ ಬೀಳುತ್ತಿದ್ದು, ಇಡೀ ದೇಶದ ಕುತೂಹಲಕ್ಕೆ ಕಾರಣವಾಗಿದೆ.
ಸುಪ್ರೀಂಕೋರ್ಟ್ ಇಂದು ಆರ್ಟಿಕಲ್ 370 ರದ್ದತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಅಂತಿಮ ತೀರ್ಪು ಪ್ರಕಟಿಸುತ್ತಿದೆ.
ಈ ತೀರ್ಪು ಪ್ರಕಟವಾಗುವ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಕಣಿವೆ ರಾಜ್ಯದಲ್ಲಿ ಹೆಜ್ಜೆ, ಹೆಜ್ಜೆಗೂ ಭದ್ರತಾ ಸರ್ಪಗಾವಲು ಹಾಕಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆಗಸ್ಟ್ 5, 2019ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕಳೆದ ಆಗಸ್ಟ್‌ನಲ್ಲಿ 16 ದಿನಗಳ ಮ್ಯಾರಥಾನ್ ವಿಚಾರಣೆ ನಡೆಸಿತ್ತು.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಲಿದೆ.
ಅಂದಿನ ರಾಜ್ಯ, ಇಂದಿನ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿದ್ದ 370ನೇ ವಿಧಿಯನ್ನು ಭಾರತ ಸರ್ಕಾರ ರದ್ದುಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿರುವ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಆರ್ಟಿಕಲ್ 370 ರದ್ದತಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಒಟ್ಟು 22 ಅರ್ಜಿಗಳು ಸಲ್ಲಿಕೆ ಆಗಿವೆ. ವಾದ-ಪ್ರತಿವಾದ ಆಲಿಸಿರುವ ಕೋರ್ಟ್ ಇಂದು ತನ್ನ ನಿರ್ಧಾರ ಪ್ರಕಟ ಮಾಡಲಿದೆ. ಹೀಗಾಗಿ ದೇಶದ ಜನರ ಚಿತ್ತ ಸುಪ್ರೀಂ ಕೋರ್ಟ್ನತ್ತ ನೆಟ್ಟಿದೆ.


























