ಮಂಗಳೂರು : ಬೋಳಾರದ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್ ಮ್ಯಾಪ್‌ನಲ್ಲಿ ಯಾರೋ ಕಿಡಿಗೇಡಿಗಳು ತಿದ್ದಿರುವ ವಿಚಾರ ಬೆಳಕಿಗೆ ಬಂದಿದೆ.
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟ ಈ ದೇವಸ್ಥಾನದ ಹೆಸರನ್ನು ‘ಬೋಳಾರ್ ಶೇಕ್ ಉಮರ್ ಸಾಹೇಬ್ ಕಾಂಪೌಂಡು’ ಎಂದು ತಿದ್ದಿರುವುದು ದೇಗುಲದ ಆಡಳಿತ ಮಂಡಳಿಯ ಗಮನಕ್ಕೆ ಬಂದಿದೆ.
ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವ ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿಯನ್ನುಂಟು ಮಾಡುವ ಮತ್ತು ಸಾಮರಸ್ಯವನ್ನು ಭಂಗಗೊಳಿಸುವ ದುರುದ್ದೇಶದಿಂದ ಈ ರೀತಿ ತಿದ್ದಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದ್ದು, ಆರೋಪಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಗೂಗಲ್ ಮ್ಯಾಪ್‌ನಲ್ಲಿ ‘ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ’ ಎಂದು ತಿದ್ದುಪಡಿ ಮಾಡಿ ಸರಿಪಡಿಸಿಕೊಡಬೇಕು ಎಂದು ಮಂಗಳೂರಿನ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

























