ಪೆರ್ಲ : ವಿವಾಹಿತೆಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ಅಡ್ಕಸ್ಥಳ ಸಮೀಪದ ಪಾಂಡಿಗಯದಲ್ಲಿ ನಡೆದಿದೆ.
ಪಾಂಡಿಗಯ ಯೋಗೇಶ್ ನಾಯಕ್ ಎಂಬವರ ಪತ್ನಿ ದಿವ್ಯ (28) ಮೃತ ಮಹಿಳೆ.

ದಿವ್ಯಾ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹುಡುಕಾಟ ನಡೆಸಿದಾಗ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ.
ಕಾಸರಗೋಡು ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ.
ಸ್ಥಳಕ್ಕೆ ಬದಿಯಡ್ಕ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಅಸಹಜ ಮರಣ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಕಾಸರಗೋಡು ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಮೃತರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

























