ಮಂಗಳೂರು : ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಸಾರಸ್ವತಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು.
ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಇದರಿಂದ ಐದು ಮಂದಿಯ ನಡುವೆ ವಾಗ್ವಾದ ನಡೆದು ಸೂರಜ್, ವರುಣ್ ಹೃದಯಭಾಗಕ್ಕೆ ಚೂರಿಯಿಂದ ತಿವಿದು ಹತ್ಯೆ ನಡೆಸಿದ್ದಾನೆ ಎನ್ನಲಾಗಿದೆ.

























