ಪುತ್ತೂರು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಸಂಪ್ಯ ಬಳಿಯ ಕಲ್ಲರ್ಪೆ ನಿವಾಸಿ, ಪತ್ರಕರ್ತ ಗಣೇಶ್ ರವರ ಸಹೋದರ ಭರತ್ ಕಲ್ಲರ್ಪೆ (24) ಮೃತ ಯುವಕ.

ಭರತ್ ಹೈದರಾಬಾದ್ ನ DRDOದಲ್ಲಿ ವಿಜ್ಞಾನಿಯಾಗಿದ್ದು, ಎರಡು ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದರು. ಇಂದು ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಭರತ್ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ವಿದ್ಯಾಭ್ಯಾಸ ಮುಗಿಸಿ ಕಳೆದ 2 ತಿಂಗಳ ಹಿಂದೆಯಷ್ಟೇ ಉದ್ಯೋಗ ಪಡೆದಿದ್ದರು.
ಮೃತರು ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

























