ಕಡಬ : ಕಳಾರ ಸಮೀಪ ಶುಕ್ರವಾರ ತಡರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತ ಬಾಲಕ.
ಬಿಪಿನ್ ನಿವಾಸಕ್ಕೆ ತಲುಪುವ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ತಂಗಿ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸರಸ್ವತಿ ಶಾಲೆಯಲ್ಲಿ ನಡೆದಿದ್ದ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೃತ ಬಾಲಕನ ಮರಣೋತ್ತರ ಪರೀಕ್ಷೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


























