ಪುತ್ತೂರು : ಧಾರಾಕಾರವಾಗಿ ಸುರಿದ ಗಾಳಿ ಮಳೆಗೆ ಮರಗಳು ಬಿದ್ದ ಕಾರಣ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆ ಪುತ್ತೂರಿನ ಹೆಬ್ಬರಬೈಲು ಎಂಬಲ್ಲಿ ಮೇ.18 ರಂದು ನಡೆದಿದೆ.
ಗಾಳಿ ಮಳೆಗೆ ಮರ ಬಿದ್ದು ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಮತ್ತು ನಗರಸಭಾ ಸದಸ್ಯ ಪ್ರೇಮ್ ಕುಮಾರ್ ರವರು ಭೇಟಿ ನೀಡಿದ್ದು, ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.