ಪುತ್ತೂರು : ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಮೇಲೆ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ನಾಲ್ಕು ಕಾರುಗಳು ಉಪ್ಪಿನಂಗಡಿ ಸೇತುವೆಯ ಮೇಲೆ ಒಂದರ ಹಿಂದೆ ಒಂದರಂತೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಕಾರುಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಕ್ರಮಕೈಗೊಂಡಿದ್ದಾರೆ.

























