ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.
ಎನ್ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರ ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.
ವಿಧಾನಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್ ಸಹ ನೇಮಕ ಮಾಡಲಾಗಿದೆ.
ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ., ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ.
ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.
ಅರವಿಂದ ಬೆಲ್ಲದ್ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಸ್ಥಾನ ನೀಡಲಾಗಿದೆ.

ವಿಪಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ವಿಧಾನಪರಿಷತ್ ವಿಪಕ್ಷ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ. ಇನ್ನು ವಿಧಾನಪರಿಷತ್ ವಿರೋಧ ಪಕ್ಷದ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಎನ್ ರವಿ ಕುಮಾರ್ ಅವರಿಗೆ ವಿಧಾನಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡಲಾಗಿದೆ.


























