ಕಡಬ : ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್ (27) ಮೃತ ಯುವಕ.
ಉದಯ ಕುಮಾರ್ ನ.12 ರಂದು ಕಾಮಗಾರಿ ನಡೆಯುತ್ತಿದ್ದ ಅವರ ನೂತನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗದಲ್ಲಿ ಗಂಭೀರ ಗಾಯವಾಗಿದ್ದು. ತತ್ಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಅವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದು, ಸಮಾಜಸೇವಕರಾಗಿದ್ದರು.
ಮೃತರು ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.


























