ಪುತ್ತೂರು: ಕ್ಯಾಂಪ್ಕೋ ಸಹಯೋಗದಲ್ಲಿ ಸರಕಾರಿ ಆಸ್ಪತ್ರೆಯ ಬಳಿ ನಿರ್ಮಾಣವಾಗಲಿರುವ 450 ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಶಿಲಾನ್ಯಾಸವು ಮೆ.19ರಂದು ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದರು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೋಡ್ಗಿ, ಆಡಳಿತ ನಿರ್ದೇಶಕ ಕೃಷ್ಣ ಕುಮಾರ್, ನಿರ್ದೇಶಕ ಎಸ್. ಆರ್ ಸತೀಶ್ಚಂದ್ರ, ಶಾಸಕ ಸಂಜೀವ ಮಠಂದೂರು, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಹಲವು ಮಂದಿ ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು