ಬೆಂಗಳೂರು : ಯುವಕನೋರ್ವ ಬಾಲ್ಕನಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ನಡೆದಿದೆ.
ಮೃತ ಯುವಕನ್ನು ದಿಪಾಂಶು ಶರ್ಮಾ(27) ಎಂದು ಗುರುತಿಸಲಾಗಿದೆ.
ದಿಪಾಂಶು ಶರ್ಮಾ ತನ್ನ ಸ್ನೇಹಿತರೊಂದಿಗೆ ಅಪಾರ್ಟ್ಮೆಂಟ್ ನಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭ ಸಿಗರೇಟ್ ಸೇದಲೆಂದು ಬಾಲ್ಕನಿಗೆ ತೆರಳಿದ್ದಾರೆ. ಈ ವೇಳೆ ಆಯತಪ್ಪಿ ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























