ಕೊಡಗು : ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯಲ್ಲಿ ನಡೆದಿದೆ.
ರಷಿಕ್ ಕುಶಾಲಪ್ಪ(20), ಆಕಾಶ್ ಬಿದ್ದಪ್ಪ(20), ಸುದೀಶ್ ಅಯ್ಯಪ್ಪ(20) ಮೃತರು.
ಈ ಮೂವರು ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದರು. ವೀಕೆಂಡ್ ಕಾರಣಕ್ಕೆ ಐವರು ಸ್ನೇಹಿತರು ಪೊನ್ನಂಪೇಟೆ ಸಮೀಪದ ಕೊಂಗಣ ನದಿ ಬಳಿ ತೆರಳಿದ್ದಾರೆ. ಒಬ್ಬೊಬ್ಬರಾಗಿ ನೀರಿಗೆ ಇಳಿದಿದ್ದಾರೆ. ನೀರಿನ ರಭಸಕ್ಕೆ ಈಜಲು ಆಗದೆ ನೀರಲ್ಲಿ ಮುಳುಗಿ ಮೂವರು ಕೊಚ್ಚಿ ಹೋಗಿದ್ದಾರೆ. ಮೂವರು ಪ್ರಾಣ ಕಳೆದುಕೊಂಡರೆ, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊನ್ನಂಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಕೊಚ್ಚಿ ಹೋಗಿದ್ದ ಮೃತದೇಹಗಳನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ಗೋಣಿಕೊಪ್ಪಲು ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.


























