Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಪೆರುವಾಜೆ : ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪೂರ್ವಭಾವಿ ಸಭೆ :ಸಾಂಪ್ರದಾಯಿಕ ಉಡುಗೆ ಧರಿಸಿ ರಥ ಎಳೆಯೋಣ : ಭಕ್ತರಿಗೆ ಮನವಿ

December 31, 2023
in ಧಾರ್ಮಿಕ, ಸುಳ್ಯ
0
ಪೆರುವಾಜೆ : ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪೂರ್ವಭಾವಿ ಸಭೆ :ಸಾಂಪ್ರದಾಯಿಕ ಉಡುಗೆ ಧರಿಸಿ ರಥ ಎಳೆಯೋಣ : ಭಕ್ತರಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಸರಿ ಸುಮಾರು 100 ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಜ.19 ರಂದು ಐತಿಹಾಸಿಕ ಬ್ರಹ್ಮರಥೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ರಥ ಎಳೆಯುವ ಪುಣ್ಯ ಕಾರ್ಯದಲ್ಲಿ ಭಾಗವಹಿಸುವ ಭಕ್ತರು ಸಾಂಪ್ರದಾಯಿಕ ಉಡುಗೆ ಧರಿಸಿ ಪಾಲ್ಗೊಳ್ಳುವಂತೆ ಜಾತ್ರೆಯ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಮನವಿ ಮಾಡಲಾಗಿದೆ.

Advertisement
Advertisement

ಜನವರಿ 16 ರಿಂದ 21 ರ ತನಕ ನಡೆಯಲಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯಲದ ವಾರ್ಷಿಕ ಜಾತ್ರೆ ಹಾಗೂ ರಥ ಸಮರ್ಪಣೆ ಕಾರ್ಯಕ್ಕೆ ಸಂಬಂಧಿಸಿ ಡಿ.31 ರಂದು ದೇವಾಲಯದಲ್ಲಿ ನಡೆದ ಸಂಘ ಸಂಸ್ಥೆಗಳ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಮಾತನಾಡಿ, ದೇವರು ರಥವನ್ನು ಏರಿ ಆರಾಧನೆ ಪಡೆಯುವ ಕಾರಣ ರಥಕ್ಕೆ ತನ್ನದೇ ಆದ ಪಾವಿತ್ರ್ಯತೆ ಇದೆ. ಹಾಗಾಗಿ ಅತ್ಯಂತ ಶುದ್ದತೆ, ಸಂಪ್ರದಾಯ ಬದ್ಧತೆಯಿಂದ ಭಕ್ತರು ಭಾಗವಹಿಸಬೇಕು. ಪಂಚೆ ಧಿರಿಸಿನಂತಹ ಸಾಂಪ್ರಾದಾಯಿಕ ವಸ್ತ್ರ ಧರಿಸಿ ಭಾಗವಹಿಸಬೇಕು ಎನ್ನುವುದು ನಮ್ಮೆಲ್ಲರ ಅಪೇಕ್ಷೆ ಎಂದರು.

ರಥ ಎಳೆಯಲು ಬ್ಯಾಡ್ಜ್
ಶತ ವರ್ಷಗಳ ಬಳಿಕ ರಥೋತ್ಸವ ನಡೆಯುವ ಕಾರಣ ಜಾತ್ರೆಯಲ್ಲಿ ಒಟ್ಟು 15 ರಿಂದ 20 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ರಥ ಸಾಗುವ ರಥಬೀದಿ ಸೀಮಿತ ಸ್ಥಳವಕಾಶ ಹೊಂದಿರುವ ಕಾರಣ ನೂಕುನುಗ್ಗಲು ತಪ್ಪಿಸಲು ರಥ ಎಳೆಯಲು ನಿರ್ಧಿಷ್ಟ ಸಂಖ್ಯೆಯ ಭಕ್ತರಿಗೆ ಅವಕಾಶ ನೀಡಿ ಬ್ಯಾಡ್ಜ್ ಒದಗಿಸಲಾಗುವುದು, ರಥ ನಿರ್ಮಾಣದ ದಾನಿಗಳಿಗೂ ಅವಕಾಶ ನೀಡಲಾಗುವುದು, ರಥ ಎಳೆಯುವ ಸಂದರ್ಭದಲ್ಲಿ ಒಟ್ಟು ವ್ಯವಸ್ಥೆಯ ಹಿತದೃಷ್ಟಿಯಿಂದ ಸಂಘ ಸಂಸ್ಥೆಗಳ 50 ಕ್ಕೂ ಅಧಿಕ ಮಂದಿ ಬ್ರಹ್ಮರಥ ಎಳೆಯಲು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಪದ್ಮನಾಭ ಶೆಟ್ಟಿ ವಿವರಿಸಿದರು.

ಜ.16 : ರಥ ಸಮರ್ಪಣೆ
ಜ.19 : ಬ್ರಹ್ಮರಥೋತ್ಸವ
ಜ.15 ರಂದು ಸಂಜೆ ರಥ ಸಮರ್ಪಣೆಗೆ ಪೂರ್ವಭಾವಿಯಾಗಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ರಾತ್ರಿ ಉದ್ಭವ ಗಣಪತಿಗೆ ಮೂಡಪ್ಪ ಸೇವೆ, ಉದ್ಭವ ಜಲದುರ್ಗಾದೇವಿಗೆ ದೊಡ್ಡ ರಂಗಪೂಜೆ ನೆರವೇರಲಿದೆ. ಜ.16 ಕ್ಕೆ ಬೆಳಗ್ಗೆ ಮಹಾಗಣಪತಿ ಹೋಮ, ಬ್ರಹ್ಮರಥ ಶುದ್ಧಿ ಕಲಶ, ಶ್ರೀ ದೇವರಿಗೆ ಬ್ರಹ್ಮರಥ ಸಮರ್ಪಣೆ, ಪಲ್ಲಕ್ಕಿ ಸಮರ್ಪಣೆ ನಡೆಯಲಿದೆ. ಜ.18 ರಂದು ದೀಪೋತ್ಸವ, ಪಲ್ಲಕ್ಕಿ ಉತ್ಸವ ನೆರವೇರಲಿದೆ. ಜ.19 ರಂದು ರಾತ್ರಿ ಪಲ್ಲಕ್ಕಿ ಉತ್ಸವ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆದು ಬಳಿಕ ಪಿಲಿಭೂತದ ಭಂಡಾರ ಬರಲಿದೆ. ಅದಾದ ನಂತರ ದೈವ-ದೇವರ ಮುಖಾಮುಖಿ ನಡೆದು ಕ್ಷೇತ್ರದ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ದೇವರು ರಥದಲ್ಲಿ ಆರೂಢರಾದ ಬಳಿಕ ಸಿಡಿಮದ್ದು ಪ್ರದರ್ಶನ ಇರಲಿದ್ದು ಈ ಬಾರಿ ಪೆರುವಾಜೆ ಬೆಡಿಯನ್ನು ಭಕ್ತರು ಕಣ್ತುಂಬಿಸಿಕೊಳ್ಳಬಹುದು ಎಂದು ಅವರು ವಿವರಿಸಿದರು.

ಸೇವಾ ಕೌಂಟರ್
ಈ ತನಕ ಸುಮಾರು 400 ಕ್ಕೂ ಅಧಿಕ ಮಂದಿ ರಥಕ್ಕೆ ನಿರ್ಮಾಣಕ್ಕೆ ನೆರವು ನೀಡಿದ್ದಾರೆ. ಈ ದಾನಿಗಳಿಗೆ ವಿಶೇಷ ಪ್ರಸಾದ ವ್ಯವಸ್ಥೆ ನೀಡುವ ನಿಟ್ಟಿನಲ್ಲಿ ಎರಡು ಸೇವಾ ಕೌಂಟರ್ ತೆರೆದು ಅದಕ್ಕೆ ವ್ಯವಸ್ಥಾಪನ ಸಮಿತಿಯ ಉಸ್ತುವಾರಿಯಲ್ಲಿ ಸ್ವಯಂ ಸೇವಕರನ್ನು ನಿಯೋಜಿಸಲು ನಿರ್ಧರಿಸಲಾಯಿತು. ಭಾವೈಕ್ಯ ಮಹಿಳಾ ಮಂಡಲಕ್ಕೆ ಇದರ ಜವಾಬ್ದಾರಿ ನೀಡಲಾಯಿತು.

ಸಂಘ ಸಂಸ್ಥೆಗಳು
ಕೈ ಜೋಡಿಸಲು ವಿನಂತಿ
ಮಾಸ್ತಿಕಟ್ಟೆಯಿಂದ ಪೆರುವಾಜೆ ಪುದ್ಧೊಟ್ಟು ಜಳಕದ ಗುಂಡಿಯ ತನಕ ರಸ್ತೆಯ ಎರಡು ಬದಿಗಳಲ್ಲಿ ಅಲಂಕಾರ, ಅಲ್ಲಲ್ಲಿ ಬ್ಯಾನರ್ ಅಳವಡಿಕೆ, ಅನ್ನದಾನ ವಿಭಾಗದಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಜಾತ್ರೆಯು ಸುಸೂತ್ರವಾಗಿ ನೆರವೇರಲು ವಿವಿಧ ವಿಭಾಗದಲ್ಲಿ ಸಂಘ ಸಂಸ್ಥೆಗಳು ಸಹಕಾರ ನೀಡುವಂತೆ ಸಭೆಯಲ್ಲಿ ವಿನಂತಿ ಮಾಡಲಾಯಿತು.

ಈ ಸಂದರ್ಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ವ್ಯವಸ್ಥಾಪನ ಸಮಿತಿ ಸದಸ್ಯ ನಾರಾಯಣ ಕೊಂಡೆಪ್ಪಾಡಿ, ವ್ಯವಸ್ಥಾಪಕ ವಸಂತ ಪೆರುವಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಮ ಯು ಪೆರುವಾಜೆ, ಸುನಿಲ್ ರೈ ಪೆರುವಾಜೆ, ಪ್ರೀತಂ ಶೆಟ್ಟಿ ಪೆರುವಾಜೆ, ರಜನೀಶ್ ಸವಣೂರು, ಶಿವಪ್ರಸಾದ್ ಪೆರುವಾಜೆ, ಕುಶಾಲಪ್ಪ ಮೊದಲಾದವರು ಸಲಹೆ ಸೂಚನೆ ನೀಡಿದರು. ವಾಸುದೇವ ಪೆರುವಾಜೆ ಸ್ವಾಗತಿಸಿದರು.

Advertisement
Previous Post

ಪೆರುವಾಯಿ : ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ರಂಗಪೂಜೆ

Next Post

ಪುತ್ತೂರು: ಆಕ್ಟಿವಾ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ; ಆಕ್ಟಿವಾ ನಜ್ಜುಗುಜ್ಜು

OtherNews

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!
ಕ್ರೈಮ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!
ಕ್ರೈಮ್

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!
ಧಾರ್ಮಿಕ

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!
ಕ್ರೈಮ್

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!
Featured

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026

Leave a Reply Cancel reply

Your email address will not be published. Required fields are marked *

Recent News

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page