ಪುತ್ತೂರು : ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವಿಜಯ್ ಕುಮಾರ್ ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.