ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಮೂಲದ ನಿವಾಸಿ ಮೊಹಮ್ಮದ್ ರಝೀನ್ (25) ಬಂಧಿತ ಆರೋಪಿ.
ಮೊಹಮ್ಮದ್ ರಝೀನ್ 17 ವರ್ಷ ಹರೆಯದ ಬಾಲಕಿಯನ್ನು 4 ತಿಂಗಳ ಹಿಂದೆ ಮೂಡಿಗೆರೆ ತಾಲೂಕಿನ ಅಣಜೂರಿನ ಗ್ರಾಮದಿಂದ ಕರೆದುಕೊಂಡು ಬಂದು ಕುಂಪಲದಲ್ಲಿ ಬಾಡಿಗೆ ಮನೆಯಲ್ಲಿರಿಸಿ ನಿನ್ನನ್ನು ಮದುವೆಯಾಗುತ್ತೇನೆ ಎಂದು ಹೇಳಿ ಒತ್ತಾಯ ಪೂರ್ವಕವಾಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ.
ಇದೀಗ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡು ಆರೋಪಿಯನ್ನು ಡಿ.31 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.