ಪುತ್ತೂರು : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಿಶುಮಂದಿರ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹೊನಲು ಬೆಳಕಿನ ಕ್ರೀಡೋತ್ಸವ-ವಾರ್ಷಿಕೋತ್ಸವ ಜ.4 ರಂದು ನಡೆಯಲಿದೆ.
ಉಡುಪಿ ಪುತ್ತಿಗೆ ಮಠದ ಶ್ರೀಸುಶೀಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎಸ್. ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ, ಸಾಮಾಜಿಕ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ, ಚನ್ನರಾಯಪಟ್ಟಣದ ಉದ್ಯಮಿ ಉಮಾಶಂಕರ್ ಡಿ.ಎನ್. ಭಾಗವಹಿಸಲಿದ್ದಾರೆ.
ಸಂಜೆ 6.30ರಿಂದ ಸಾಂಸ್ಕೃತಿಕ ಮತ್ತು ಸಾಹಸ ಪ್ರದರ್ಶನ, ಯಕ್ಷಗಾನ ಆಧಾರಿತ ನೃತ್ಯ ರೂಪಕ, ಸಮೂಹ ನೃತ್ಯಗಳು, ಯೋಗಾಸನ, ಕರಾಟೆ, ರೂಪಿಕಾ ಸಮತೋಲನ, ಬೆಂಕಿಯಲ್ಲಿ ಸಾಹಸಗಳು, ಕೋಲಾಟ, ಗೋಪುರ, ಮಲ್ಲಕಂಬ, ತಾಲೀಮು, ಸೈಕಲ್ ಸಾಹಸಗಳು, ದೀಪಾರತಿ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.





























