ಬಂಟ್ವಾಳ : ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಘಟನೆಯನ್ನು ಖಂಡಿಸಿ ಬಿ.ಸಿ.ರೋಡಿನ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಜಿಲ್ಲಾ ಸಂಯೋಜಕ್ ನರಸಿಂಹ ಶೆಟ್ಟಿ ಮಾಣಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಸಭೆಯಲ್ಲಿ ಮಾತನಾಡಿದರು.
ಹಿಂದೂ ಕಾರ್ಯಕರ್ತ ಶ್ರೀಕಾಂತ್ ಸಹಿತ ಕಾರ್ಯಕರ್ತರನ್ನು ಶೀಘ್ರವಾಗಿ ಬಿಡುಗಡೆಗೊಳಿಸಿ ಎಂದು ಆಗ್ರಹ ಮಾಡಿದರು. ಬಿಡುಗಡೆ ಮಾಡುವ ಕೆಲಸ ಮಾಡದೆ ಮತ್ತೆ ಮತ್ತೆ ಹಿಂದೂ ಕಾರ್ಯಕರ್ತರನ್ನು ಕೆಣಕಲು ಹೋದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಯೋಧ್ಯೆಯ ಸಂಭ್ರಮದಲ್ಲಿರುವ ಹಿಂದೂ ಸಮಾಜದ ಮೇಲೆ ಸರ್ಕಾರ ಉದ್ದೇಶ ಪೂರ್ವಕವಾಗಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರತಿ ಬಾರಿ ಹಿಂದೂ ಸಮಾಜದ ಮೇಲೆ ನಡೆಯುವ ದಾಳಿಯನ್ನು ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪ್ರಮುಖರಾದ ಸಮಿತ್ ರಾಜ್ ಧರೆಗುಡ್ಡೆ, ಅರುಣ್ ಸಜೀಪ, ಗಣೇಶ್ ಕುಲಾಲ್ ಕೆದಿಲ, ದಿನೇಶ್ ದಂಬೆದಾರ್, ಪ್ರಭಾಕರ್ ಪ್ರಭು, ರವಿರಾಜ್ ಬಿಸಿರೋಡು, ರಮಾನಾಥ ರಾಯಿ,ಹರೀಶ್ ತಲೆಂಬಿಲ, ರವಿಕೆಂಪುಗುಡ್ಡೆ, ಪ್ರಶಾಂತ್ ಇರಾ, ಪ್ರಶಾಂತ್ ಕೆಂಪುಗುಡ್ಡೆ, ಶೇಖರ್ ಶೆಟ್ಟಿ ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು.