ಬೆಳ್ಳಾರೆ : ಮಹಿಳೆಯೋರ್ವರ ಮೇಲೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಗೂ ಜೀವ ಬೆದರಿಕೆ ಹಾಕಿರುವ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಳ್ತಿಗೆ ನಿವಾಸಿ ಚಿತ್ರಪ್ರಭಾ ರೈ ನೀಡಿರುವ ದೂರಿನ ಮೇರೆಗೆ ಪ್ರದೀಪ್ ಶೆಟ್ಟಿ, ಭಾಸ್ಕರ ರೈ ಧರ್ಮಸ್ಥಳ, ರವೀಂದ್ರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಸರಳ ರೈ, ಜಯಶ್ರೀ ಶೆಟ್ಟಿ, ಕನ್ಯಾಕುಮಾರಿ ರೈ, ಕಾವ್ಯ ರೈ, ಅಮಿತಾ ರೈ, ವಾರಿಜ ರೈ, ಯತೀಂದ್ರನಾಥ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಚಿತ್ರಪ್ರಭಾ ರೈ ಎಂಬವರು ಜ.5 ರಂದು ಸಂಜೆ ಮನೆಗೆ ಹೋಗುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಪ್ರದೀಶ್ ಶೆಟ್ಟಿ, ಭಾಸ್ಕರ ರೈ ಧರ್ಮಸ್ಥಳ, ರವೀಂದ್ರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಸರಳ ರೈ, ಜಯಶ್ರೀ ಶೆಟ್ಟಿ, ಕನ್ಯಾಕುಮಾರಿ ರೈ, ಕಾವ್ಯಾ ರೈ,ಅಮಿತಾ ರೈ, ವರಿಜಾ ರೈ, ಯತೀಂದ್ರನಾಥ ಶೆಟ್ಟಿ ಹಾಗೂ ಇತರ ಅಪರಿಚಿತ ಇಬ್ಬರು ಮಹಿಳೆಯರು ಹಾಗೂ 6 ಪುರುಷರು ಗುಂಪು ಸೇರಿ, ತಡೆದು ನಿಲ್ಲಿಸಿ, ರಾಕೇಶ್ ಶೆಟ್ಟಿ ಮತ್ತು ಪ್ರಶಾಂತ ಎಂಬವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ನೀಡಿದ ಪ್ರಕರಣವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ, ಅವ್ಯಾಚವಾಗಿ ಬೈದು, ಆ್ಯಸಿಡ್ ಎರಚುವುದಾಗಿ ಬೆದರಿಸಿದ್ದು, ಬಳಿಕ ಜೀವ ಬೆದರಿಕೆ ಒಡ್ಡಿ ಅಲ್ಲಿಂದ ತೆರಳಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ:04/2024 ಕಲಂ 341,504,506 ಜೊತೆಗೆ 149 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
























