ಸುಳ್ಯ : ಖಾಸಗಿ ಬಸ್ ನಿಲ್ದಾಣದ ಬಳಿ ಅಳವಡಿಸಿದ್ದ ಬ್ಯಾನರ್ ನ ಮಧ್ಯಭಾಗವನ್ನು ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವೊಂದು ಲಭ್ಯವಾಗಿದೆ.
ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌ನ ಮದ್ಯಬಾಗವನ್ನು, ಯಾರೋ ಹರಿದು ತೆಗೆದುಕೊಂಡು ಹೋಗಿರುವ ಬಗ್ಗೆ ಜ.6 ರಂದು ಆಟೋ ರಿಕ್ಷಾ ಸಂಘದ ಅಧ್ಯಕ್ಷರು ಸುಳ್ಯ ಪೊಲೀಸ್ ಠಾಣೆಯಲ್ಲಿ
ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕೃತ್ಯವೆಸಗಿದವರ ಪತ್ತೆಗಾಗಿ, ಸುಳ್ಯದಲ್ಲಿರುವ ಸುಮಾರು 40 ಸಿಸಿ ಕ್ಯಾಮಾರಗಳ ಪೂಟೇಜ್‌ಗಳನ್ನು ಪರಿಶೀಲನೆ ಮಾಡಿದಾಗ, ಜ.5 ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುತ್ತಿರುವ ಅಪರಿಚಿತ ವಯಸ್ಸಾದ ವ್ಯಕ್ತಿಯೋರ್ವ, ಸದರಿ ಬ್ಯಾನರ್ ಹರಿದು ತನ್ನ ಕೈಯಲ್ಲಿ ಹಿಡಿದುಕೊಂಡು, ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ತಿಳಿದು ಬಂದಿರುತ್ತದೆ ಹಾಗೂ ಬಳಿಕ ಸುಳ್ಯದ ವಿವೇಕನಂದ ಸರ್ಕಲ್ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿದ್ದನ್ನು ಸಾರ್ವಜನಿಕರ ನೋಡಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ.
ಹರಿದ ಬ್ಯಾನರ್ ತುಂಡನ್ನು ಪರಿಶೀಲಿಸಲಾಗಿ ಅಯೋಧ್ಯೆಯ ಪೋಟೋಗಾಗಲಿ ಹಾಗೂ ಶ್ರೀರಾಮನ ಪೋಟೋಗಾಗಲಿ ಯಾವುದೇ ರೀತಿಯ ಹಾನಿಯಾಗಿರುವುದು ಕಂಡುಬಂದಿರುವುದಿಲ್ಲ. ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.


























