ಕಡಬ : ಅನಾರೋಗ್ಯದಿಂದಾಗಿ ಯುವತಿಯೋರ್ವಳು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕ ರವರ ಪುತ್ರಿ, ಸುಬ್ರಹ್ಮಣ್ಯ ಪದವಿ ಕಾಲೇಜಿನ ವಿದ್ಯಾರ್ಥಿನಿ ತೃಪ್ತಿ ಮೃತ ಯುವತಿ.
ತೃಪ್ತಿ ಎರಡು ದಿನಗಳಿಂದ ಅನಾರೋಗ್ಯದಿಂದಿದ್ದು, ನಿನ್ನೆ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವತಿ ನಿನ್ನೆ ರಾತ್ರಿ ನಿಧನರಾಗಿರುವುದಾಗಿ ವರದಿಯಾಗಿದೆ.


























