ಪುತ್ತೂರು : ಜ.21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶವನ್ನು ಕಾರ್ಯಕರ್ತರು ಯಶಸ್ವಿಗೊಳಿಸಬೇಕು ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 10 ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಮಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ಲಕ್ಷಕ್ಕೂಮಿಕ್ಕಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಜಿಲ್ಲೆಯಿಂದ ರಾಜ್ಯಕ್ಕೆ, ದೇಶಕ್ಕೆ ಒಂದು ಸಂದೇಶವನ್ನು ರವಾನೆ ಮಾಡಬೇಕಿದೆ. ಬೂತ್ ಮತ್ತು ವಲಯಾಧ್ಯಕ್ಷರುಗಳು ಬೂತ್ ಮಟ್ಟದಿಂದ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು. ಈಗಾಗಲೇ ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಮನೆ ಮನೆಗೆ ತಲುಪಿದೆ. ಜನ ಕಾಂಗ್ರೆಸ್ ಸರಕಾರ ಬಂದ ಬಳಿಕ ನೆಮ್ಮದಿಯಿಂದ ಇದ್ದಾರೆ. ಪಕ್ಷದ ಗ್ಯಾರಂಟಿ ಯೋಜನೆಯಿಂದ ಅನೇಕ ಕುಟುಂಬಗಳಿಗೆ ಶಕ್ತಿ ತುಂಬಿದೆ ಇವೆಲ್ಲವನ್ನೂ ಕಾರ್ಯಕರ್ತರು ಜನರಿಗೆ ತಿಳಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಮಾಡಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿನಯಕುಮಾರ್ ಸೊರಕೆ, ಜೆ ಆರ್ ಲೋಬೊ, ಎಂಎಲ್ಸಿ ಮಂಜುನಾಥ ಭಂಡಾರಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.


























