Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು : ಯುವತಿಯ ಕೊಲೆ ಯತ್ನ ಪ್ರಕರಣ : ಅಪರಾಧಿಗೆ 18 ವರ್ಷ 1 ತಿಂಗಳ ಸಜೆ

January 13, 2024
in ಕ್ರೈಮ್, ಮಂಗಳೂರು
0
ಮಂಗಳೂರು : ಯುವತಿಯ ಕೊಲೆ ಯತ್ನ ಪ್ರಕರಣ : ಅಪರಾಧಿಗೆ 18 ವರ್ಷ 1 ತಿಂಗಳ ಸಜೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ, ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ 2019ರಲ್ಲಿ ಯುವತಿಯೊಬ್ಬಳಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಯುವಕ ಸುಶಾಂತ್‌ ಯಾನೆ ಶಾನ್‌ (31)ಗೆ ಒಟ್ಟು 18 ವರ್ಷ 1 ತಿಂಗಳು ಸಜೆ ವಿಧಿಸಿ ಆದೇಶ ನೀಡಿದೆ.

Advertisement
Advertisement

ಐಪಿಸಿ ಸೆಕ್ಷನ್‌ 341 ಶಿಕ್ಷಾರ್ಹ ಕಲಂಗೆ 1 ತಿಂಗಳು ಸಜೆ. 326 ಶಿಕ್ಷಾರ್ಹ ಕಲಂಗೆ 7 ವರ್ಷ ಕಠಿನ ಸಜೆ, 1 ಲಕ್ಷ ರೂ. ದಂಡ. ದಂಡ ಪಾವತಿಗೆ ವಿಫಲವಾದರೆ 1 ವರ್ಷ ಕಠಿನ ಕಜೆ. 307ರ ಶಿಕ್ಷಾರ್ಹ ಕಲಂಗೆ 10 ವರ್ಷದ ಕಠಿನ ಸಜೆ ಮತ್ತು 1 ಲಕ್ಷ ರೂ.ದಂಡ. ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷ ಕಠಿನ ಸಜೆ. 354ರ ಶಿಕ್ಷಾರ್ಹ ಕಲಂಗೆ 1 ವರ್ಷದ ಕಠಿನ ಸಜೆ ಮತ್ತು 10 ಸಾವಿರ ರೂ.ದಂಡ ಪಾವತಿ. ದಂಡ ಪಾವತಿಸಲು ತಪ್ಪಿದರೆ 2 ತಿಂಗಳ ಕಠಿನ ಸಜೆ. 309 ಶಿಕ್ಷಾರ್ಹ ಕಲಂಗೆ 1 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ಎಲ್ಲ ಶಿಕ್ಷೆಗಳನ್ನು ಒಂದರ ಅನಂತರ ಒಂದರಂತೆ ಪ್ರತ್ಯೇಕವಾಗಿ ಅನುಭವಿಸಬೇಕು ಎಂದು ನ್ಯಾಯಧೀಶರಾದ ಪ್ರೀತಿ ಕೆ.ಪಿ.ಅವರು ಆದೇಶ ನೀಡಿದ್ದಾರೆ. ದಂಡದ ರೂಪದಲ್ಲಿ ವಸೂಲಾಗುವ ಹಣದಲ್ಲಿ 2 ಲಕ್ಷ ರೂ. ವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Advertisement

ಪ್ರಕರಣದ ವಿವರ

Advertisement

2019ರ ಜೂ.28 ರಂದು ಸಂಜೆ 4.30ಕ್ಕೆ ಕೋಟೆಕಾರು ಗ್ರಾಮದ ದೇರಳಕಟ್ಟೆ ಬಗಂಬಿಲ ರಸ್ತೆಯ ಶಾಂತಿಧಾಮದ ಬಳಿ ಸಂತ್ರಸ್ತ ಯುವತಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಸುಶಾಂತ್‌ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಬಳಿಕ ಆಕೆಯನ್ನು ತಡೆದು ಅವಳ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿ, ಮಾನಭಂಗ ಮಾಡಿ, ತನ್ನಲ್ಲಿದ್ದ ಚೂರಿಯಿಂದ ಆಕೆಯ ಎದೆಗೆ, ಹೊಟ್ಟೆಗೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರವಾಗಿ ತಿವಿದು ಗಾಯಗೊಳಿಸಿ ಕೊಲೆ ಮಾಡಲು ಯತ್ನಿಸಿದ್ದ. ಆಕೆ ಪ್ರಜ್ಞಾಹೀನಳಾಗಿ ಬಿದ್ದ ಬಳಿಕ ಅದೇ ಚೂರಿಯಿಂದ ತನ್ನ ಕುತ್ತಿಗೆಗೆ ಹಾಗೂ ಕೈಯ ನಾಡಿಗೆ ಇರಿದು ಆತ್ಮಹತ್ಯೆಗೆ ಪ್ರಯತ್ನಪಟ್ಟು ಸ್ಥಳದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ.

ಸ್ಥಳೀಯರು, ಪಕ್ಕದ ಖಾಸಗಿ ಆಸ್ಪತ್ರೆ ಸಿಬ್ಬಂದಿಯವರು ಧಾವಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇಬ್ಬರೂ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದರು.

ಜಾಮೀನಿನಲ್ಲಿ ಬಿಡುಗಡೆಯಾಗಿದ್ದ

ಸುಶಾಂತ್‌ ನೃತ್ಯ ತರಬೇತುದಾರನಾಗಿದ್ದು, ಯುವತಿ ಕಲಿಯುತ್ತಿದ್ದ ಕಾಲೇಜಿನಲ್ಲಿ ನೃತ್ಯ ಕಲಿಸುತ್ತಿದ್ದ. ಆಕೆಯೊಂದಿಗೆ ಗೆಳೆತನದಿಂದ ಇದ್ದು, ಪ್ರೀತಿಸುವಂತೆ, ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಬಗ್ಗೆ ಈ ಮೊದಲೇ ಆಕೆ ಕಾರ್ಕಳದ ಗ್ರಾಮಾಂತರ ಠಾಣೆಯಲ್ಲಿ ಆತನ ವಿರುದ್ಧ ದೂರು ದಾಖಲಿಸಿದ್ದಳು. ಆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆತ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಈ ದ್ವೇಷದಿಂದ ಆತ ಕೃತ್ಯ ಎಸಗಿದ್ದ.

ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಉಳ್ಳಾಲ ಠಾಣೆಯ ಅಂದಿನ ಉಪನಿರೀಕ್ಷಕರಾಗಿದ್ದ ಗುರಪ್ಪ ಕಾಂತಿ ಅವರು ಸಮಗ್ರ ತನಿಖೆ ನಡೆಸಿ, 34 ಸಾಕ್ಷಿದಾರರನ್ನು ವಿಚಾರಣೆ ಮಾಡಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿ ದಾಖಲಿಸಿದ್ದರು. ಘಟನೆಯ ಸಂಪೂರ್ಣ ಚಿತ್ರಣ ಸಮೀಪದ ಕೆಎಸ್‌ ಹೆಗ್ಡೆ ಆಸ್ಪತ್ರೆಯ ಹಿಂಭಾಗದ 2 ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ತನಿಖಾಧಿಕಾರಿಯವರು ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು ಸಂಗ್ರಹಿಸಿ ಪ್ರಮುಖ ಸಾಕ್ಷ್ಯಧಾರವನ್ನಾಗಿ ದೋಷಾರೋಪಣ ಪಟ್ಟಿಯಲ್ಲಿ ಸೇರಿಸಿದ್ದರು.

ಒಡನಾಟದಲ್ಲಿದ್ದ ಬಗ್ಗೆ ಸಾಕ್ಷಿ ನುಡಿದಿದ್ದ

2021ರ ಫೆಬ್ರವರಿ 10ರಂದು ವಿಚಾರಣೆ ಪ್ರಾರಂಭಗೊಂಡು ಅಭಿಯೋಜನೆ ಪರ 21 ಸಾಕ್ಷಿದಾರರನ್ನು ವಿಚಾರಣೆ ಮಾಡಲಾಗಿತ್ತು. ಆರೋಪಿಯೂ ತನ್ನ ಪರವಾಗಿ ತನ್ನ ತಂಗಿಯನ್ನು ನ್ಯಾಯಾಲಯದ ಮುಂದೆ ಸಾಕ್ಷ್ಯವಾಗಿ ಹಾಜರುಪಡಿಸಿದ್ದ. ತಾನು ಹಾಗೂ ಸಂತ್ರಸ್ತೆ ಪ್ರೀತಿಸುತ್ತಿದ್ದೆವು. ಸಂತ್ರಸ್ತೆ ತನ್ನ ಹಾಗೂ ಮನೆಯವರ ಜತೆ ಒಡನಾಟದಲ್ಲಿ ಇದ್ದಳು ಎಂದು ಸಾಕ್ಷಿ ನುಡಿದಿದ್ದು, ಅದಕ್ಕೆ ಸಂಬಂಧಿಸಿದ ಛಾಯಾಚಿತ್ರಗಳನ್ನೂ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಅಭಿಯೋಜನೆಯ ಸಾಕ್ಷ್ಯಧಾರಗಳನ್ನು ಪರಿಗಣಿಸಿ, ಆತನ ಮೇಲೆ ಹೊರಿಸಲಾದ ಎಲ್ಲ ಶಿಕ್ಷಾರ್ಹ ಕಲಂಗೆ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.

ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್‌ ನಾಯಕ್‌ ಅವರು ವಾದ ಮಂಡಿಸಿದ್ದರು.

Previous Post

ಬಂಟ್ವಾಳ : ಪತ್ನಿಗೆ ಹಲ್ಲೆಗೈದು ಚಿನ್ನ ದೋಚಿದ ಪತಿ : ಪ್ರಕರಣ ದಾಖಲು

Next Post

ಪೆರುವಾಜೆ : ಜ.15 ರಿಂದ‌ 21 ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

OtherNews

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!
ಕ್ರೈಮ್

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!
ಕ್ರೈಮ್

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!
ಕ್ರೈಮ್

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026

Leave a Reply Cancel reply

Your email address will not be published. Required fields are marked *

Recent News

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

September 23, 2026
ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.