ವಿಟ್ಲ : ಎಂ.ಜಿ.ಆರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ15 ರಂದು ವಿಟ್ಲ-ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.
ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ಖತೀಬ ಮಹಮ್ಮದ್ ರಫೀಖ್ ಅಹ್ಸನಿ, ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯ ಸುನೀಲ್ ಪ್ರವೀಣ್ ಪಿಂಟೋ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಬಂಗಾರು ಅರಸರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ರಾಮನಗರ ಶಾಸಕ ಇಕ್ಬಾಲ್ ಹುಸೈನ್, ಮಾಜಿ ಸಚಿವ ಬಿ. ರಮಾನಾಥ ರೈ, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಯ ಅಧ್ಯಕ್ಷ ಎಸ್.ಎಮ್ ರಶೀದ್ ಹಾಜಿ, ಬೆಂಗಳೂರು ಹಲಾಲ್ ಹೌಸಿಂಗ್ ಫೈನಾನ್ಸಿಯಲ್ ಅಡ್ವೈಸರ್ & ಮ್ಯಾನೇಜಿಂಗ್ ಡೈರೆಕ್ಟರ್ ಅಹಮದ್ ಹಸನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಟ ಹಾಗೂ ಬಿಗ್ ಬಾಸ್ ಸೀಸನ್ 8 ವಿನ್ನರ್ ಮಂಜು ಪಾವಗಡ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪದ್ಮಶ್ರೀ ಅಮೈ ಮಹಾಲಿಂಗ ನಾಯ್ಕ್, ವಿಟ್ಲ ಮುಡ್ನೂರು ಗ್ರಾಮದ ಕೃಷಿಕ ಚಂದ್ರಶೇಖರ ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು., ಹಾಗೆಯೇ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.



























